ಕಡಬ: ಮಿನಿ ವಿಧಾನಸೌಧ, ತಾ.ಪಂ. ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ ➤ 150 ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಎಸ್.ಅಂಗಾರ

ಕಡಬ, ಮಾ.24. ಹೊಸದಾಗಿ ನಿರ್ಮಾಣಗೊಂಡ ಕಡಬ ತಾಲೂಕು ಆಡಳಿತ ಸೌಧ, ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಕಡಬ ತಾಲೂಕಿನ ಹಿರಿಮೆಗೆ ಗರಿಯಾದ ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳ ಉದ್ಘಾಟನೆಯನ್ನು ಬಂದರು, ಒಳನಾಡು ಜಲಸಾರಿಗೆ ಹಾಗೂ ಮೀನುಗಾರಿಕಾ ಸಚಿವರಾದ ಎಸ್. ಅಂಗಾರರವರು ಶುಕ್ರವಾರದಂದು ನೆರವೇರಿಸಿದರು.

ಕಡಬದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಕಚೇರಿಗಳು ಲಭ್ಯವಾಗುವಂತೆ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧವನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ ಸಚಿವರು, ಬಳಿಕ 4.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಕೊಯಿಲದಲ್ಲಿ 136 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಮೊದಲನೇ ಹಂತದ ಕಟ್ಟಡವನ್ನು ವೀಡಿಯೋಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು. ಬಳಿಕ ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.

Also Read  ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಪಶುವೈದ್ಯಕೀಯ ಕಾಲೇಜಿನ ಕಾರ್ಯ ಪಾಲಕ ಅಭಿಯಂತರರಾದ ದಾಮೋದರ್, ಬೀದರ್ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕೆ.ಸಿ‌. ವೀರಣ್ಣ, ಬೀದರ್ ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ. ರಂಗನಾಥ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕುಮಾರ್, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿಜಯ್‌ ಕುಮಾರ್, ದ.ಕ. ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಅರುಣ್‌ ಕುಮಾರ್ ಶೆಟ್ಟಿ ಎನ್., ಎಚ್. ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಕುಮಾರ್ ಭಂಡಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಭರತ್‌ ಬಿ.ಎಂ., ಸುಳ್ಯ ತಹಶೀಲ್ದಾರರಾದ ಮಂಜುನಾಥ್, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ, ಕಡಬ ಉಪ ತಹಶಿಲ್ದಾರ್ ಮನೋಹರ್ ಮೊದಲಾದವರು ಉಪಸ್ಥಿತರಿದ್ದರು.

Also Read  ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ

error: Content is protected !!
Scroll to Top