(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ, ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ, ಎಲ್ಲ ವಿದ್ಯಾರ್ಥಿ ಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.
Also Read ಪಂಜ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ➤ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ ಸಹಿತ ಪಿಕಪ್ ವಶಕ್ಕೆ