ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 24. ದಿವಂಗತ ನಟ ಡಾ.ಪುನೀತ್ ರಾಜ್​ ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ ಎಂದರು.

Also Read  ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ

 

error: Content is protected !!
Scroll to Top