ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್

(ನ್ಯೂಸ್ ಕಡಬ) News kadaba.com ಮಂಗಳೂರು,ಮಾ.24 ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಕಸ ಸಂಗ್ರಹಣೆಯ ಕಾರ್ಮಿಕರು ಮುಷ್ಕರ ಹೂಡಿರುವ ಕಾರಣ ,ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಶಾಸಕ ಕಾಮತ್ ಅವರು ಮಾತುಕತೆಯ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

Also Read  ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಇಡೀ ರಾಜ್ಯದಾದ್ಯಂತ ಕಾರ್ಮಿಕರು ಪ್ರತಿಭಟನೆ ಕೈಗೊಂಡಿರುವ ಕಾರಣ ರಾಜ್ಯದಲ್ಲಿ ಮುಷ್ಕರ ಕೈಬಿಟ್ಟ ನಂತರವೇ ಕೆಲಸಕ್ಕೆ ಹಾಜರಾತ್ತೇವೆ ಎಂದು ಕಾರ್ಮಿಕರು ತಿಳಿಸಿದ್ದಾರೆ.

 

 

error: Content is protected !!
Scroll to Top