ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹ    ➤ ಸಚಿವಾಲಯ ಅಧಿಸೂಚನೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.24. ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

C.C./18712/2019 ರಲ್ಲಿ ಸೂರತ್‌ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಶಿಕ್ಷೆ ವಿಧಿಸಿದ ಪರಿಣಾಮವಾಗಿ, ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿ ಅವರು ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖವಾಗಿದೆ.

Also Read  ಸಬ್ಸಿಡಿ ದರ ಪ್ರತೀ ಕೆ.ಜಿ.ಗೆ 70ರೂ.ಗೆ ಇಳಿಕೆ ಕಂಡ 'ಕೆಂಪುಸುಂದರಿ'

 

error: Content is protected !!
Scroll to Top