ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ.

 

Scroll to Top