(ನ್ಯೂಸ್ ಕಡಬ) Newskadaba.com ನವದೆಹಲಿ,ಮಾ.24 ಕೋವಿಡ್-19 ಸೋಂಕು ದೇಶದಲ್ಲಿ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಮಾರ್ಗಸೂಚಿ ರವಾನಿಸಿರುವ ಕೇಂದ್ರ ಆರೋಗ್ಯ ಇಲಾಖೆ, ಸೋಂಕು ವ್ಯಾಪಿಸದಂತೆ ತಡೆಯಲು ಪರೀಕ್ಷೆ, ಪತ್ತೆ, ಚಿಕಿತ್ಸೆ, ಕೋವಿಡ್ ನಿಯಮ ಪಾಲನೆ, ಲಸಿಕಾಕರಣದ ಕಡೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದೆ.