ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.24. ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

 

error: Content is protected !!
Scroll to Top