ನಾಳೆ(ಮಾ.26) ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯ ನಾಮಕರಣ

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.25. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭವು ಮಾ.26ರ(ನಾಳೆ.) ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ಶ್ರೀ ರಾಮುಲು ನಾಮಫಲಕ ಉದ್ಘಾಟಿಸುವರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಗೌರವ ಉಪಸ್ಥಿತಿವಹಿಸುವರು ಎನ್ನಲಾಗಿದೆ.

Also Read  ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ

 

error: Content is protected !!
Scroll to Top