ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ        

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.25. ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.

ಇಂದಿನಿಂದ ಮಾರ್ಚ್ 27 ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್ 26 ರಿಂದ ಬೀದರ್ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Scroll to Top