ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

Accident

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.25. ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group