ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ ➤ ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಒದಗಿಸಿಕೊಟ್ಟಿರುವಂತಹ ಸುಮಾರು 20 ಲಕ್ಷ ಮೌಲ್ಯದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ಪ್ರಕೃತಿ ವಿಭಾಗಕ್ಕೆ ಚಾಲನೆ ಕಾರ್ಯಕ್ರಮ ಮಾರ್ಚ್ 25ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ ಕಟೀಲ್ ಹಾಗೂ ಇತರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Scroll to Top