ವೆನ್ ಲಾಕ್ ಆಸ್ಪತ್ರೆಯಲ್ಲಿ 20 ಲಕ್ಷ ರೂ.ವೆಚ್ಚದ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ      ➤ ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಒದಗಿಸಿಕೊಟ್ಟಿರುವಂತಹ ಸುಮಾರು 20 ಲಕ್ಷ ಮೌಲ್ಯದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ಪ್ರಕೃತಿ ವಿಭಾಗಕ್ಕೆ ಚಾಲನೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ ಕಟೀಲ್ ಹಾಗೂ ಇತರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Also Read  ಕೈಕಂಬಕ್ಕೆ ಮತ್ತೆ ಕಾಲಿಟ್ಟರೇ ನಕ್ಸಲರು...? ► ಭಾಗೀಮಲೆ ರಕ್ಷಿತಾರಣ್ಯದಲ್ಲಿ ಸಂಚರಿಸಿದ ಗುಮಾನಿಯಿಂದ ಆತಂಕದಲ್ಲಿ ಗ್ರಾಮಸ್ಥರು

 

error: Content is protected !!
Scroll to Top