ಹಣದೋಚಿ ಪರಾರಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.25. ವ್ಯಕ್ತಿಯೋರ್ವರ ಕೈಯಲ್ಲಿದ್ದ 10 ಲಕ್ಷ ರೂ. ಹಣದ ಕಟ್ಟನ್ನು ಕಿತ್ತೊಯ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಬಗ್ಗೆ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ನಡೆಸಿ, ಈತನನ್ನು ಬಂಧಿಸಿ, ಆತನಲ್ಲಿದ್ದ 9 ಲಕ್ಷ ರೂ.ವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಮುಸ್ತಾಫಾ ಈ ಹಿಂದೆ ಹಾಸನ ಜಿಲ್ಲೆಯ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲಾರಿ ಕಳವು ಪ್ರಕರಣದ ಆರೋಪಿ ಕೂಡಾ ಆಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Also Read  ಬೆಳ್ತಂಗಡಿ: ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಒಟಿಪಿ ಪಡೆದು ಹಣ ವಂಚನೆ

error: Content is protected !!
Scroll to Top