(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.25. ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ.

ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾರಿಗೂ ಹೆದರುವುದಿಲ್ಲ, ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.