ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!          

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.25. ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ ಕಾರ್ಮಿಕ ಎಂದು ಗುರುತಿಸಲಾಗಿದೆ. ಸೋಮಶೇಖರ್ ಮತ್ತು ಶಾಂತಾ ಗದಗ ಮೂಲದ ಮುಂಡರಗಿ ತಾಲೂಕಿನವರು ಎಂದು ತಿಳಿದು ಬಂದಿದೆ.

ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ, ಇದರಿಂದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಮಹಿಳೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Also Read  ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

ಸದ್ಯ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ. ಜೆಸಿಬಿ ಮುಖಾಂತರ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಸ್ಥಳಕ್ಕೆ ಶಾಸಕ ಅಂಗಾರ ಅವರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

 

 

 

error: Content is protected !!
Scroll to Top