ಬಂಟ್ವಾಳ: ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ನಿರ್ವಾಹಕ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 26. ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಬಸ್ ನಿರ್ವಾಹಕನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ಡಿಪೋ ನಿರ್ವಾಹಕ ದವಾಳ್ ಸಾಬ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯು ಕಲ್ಲಡ್ಕದ ವಿದ್ಯಾಸಂಸ್ಥೆಯೊಂದರ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ ಮನೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್ ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದರು. ಈ ಸಂದರ್ಭ ಬಸ್ ನಲ್ಲಿ ನೊಂದ ಬಾಲಕಿ, ಬಸ್ ಚಾಲಕ ಮತ್ತು ನಿರ್ವಾಹಕ ಮೂರೇ ಜನ ಇದ್ದ ವೇಳೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಬಂಧಿಸಿದೆ.

Also Read  ಆಲಂಕಾರು: ಪಾರ್ಸೆಲ್ ನಲ್ಲಿ ಸ್ಮಾರ್ಟ್ ಫೋನ್ ಬದಲಿಗೆ ಸಿಹಿತಿಂಡಿ ಮತ್ತು ದೇವರ ಮೂರ್ತಿ ಕಳುಹಿಸಿ ವಂಚನೆ ► ಯುವತಿಯ ಮಾತಿಗೆ ಮರುಳಾಗಿ ಮೋಸ ಹೋದ ಕಾಲೇಜು ವಿದ್ಯಾರ್ಥಿ

error: Content is protected !!
Scroll to Top