(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಂಡಳಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಎಲ್ಲ ಶಾಲೆಗಳಿಗೂ ರವಾನಿಸಲಿದೆ.
ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.
5, 8 ನೇ ತರಗತಿಗೆ ಮಾರ್ಚ್-27 ರಿಂದ ಏಪ್ರಿಲ್-01 ರವರೆಗೆ ಮೌಲ್ಯಾಂಕನ ನಡೆಯಲಿದೆ. 5 ಮತ್ತು 8 ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.