ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ-ನಿರೀಕ್ಷಕ ಜಯಶ್ರೀ ಪ್ರಭಾಕರ ರವರು ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಓರ್ವ ವ್ಯಕ್ತಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಎನ್ನಲಾಗಿದೆ.

Also Read  ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು

error: Content is protected !!
Scroll to Top