ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮಾ.27. ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.


ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳು ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ ಎಂಬುವರಿಗೆ ಸೇರಿದ್ದು ಎನ್ನಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿಮಾನದಲ್ಲಿ ಗಗನಸಖಿಯ ಜೊತೆ ಅನುಚಿತ ವರ್ತನೆ..! ➤ ಪ್ರಯಾಣಿಕರ ವಿರುದ್ದ ದೂರು ದಾಖಲು

error: Content is protected !!
Scroll to Top