ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ)newskadaba.com  ಮೈಸೂರು, ಮಾ.27. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಶಿವಮ್ಮ ಮೇಲೆ ಪತಿ ಚಂದ್ರು ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ಶಿವಮ್ಮ ದೂರು (Complaint) ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು ಮಾವ, ಅತ್ತೆ ತಲೆಮರೆಸಿಕೊಂಡಿದ್ದಾರೆ.

 

Scroll to Top