27 ಆಟೋ ಚಾಲಕರಿಗೆ ಬೈಕ್,ಟ್ಯಾಕ್ಸಿ ಚಾಲಕರಿಂದ ಕೌಂಟರ್        ➤ ಮಾ.27( ಇಂದು) ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ                        

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ,27 ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರು ಇದೀಗ ಕೌಂಟರ್ ಕೊಡಲು ಮುಂದಾಗಿದ್ದು, ಮಾ.27(ಇಂದು) ಆಟೋ ಚಾಲಕರ ವಿರುದ್ಧ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ ಫ್ರೀಡಂ ಪಾರ್ಕ್ ನಲ್ಲಿ ರ್ಯಾಪಿಡೋ ಬೈಕ್ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.ಆಟೋ ಚಾಲಕರ ದೌರ್ಜನ್ಯ ಖಂಡಿಸಿ ಬೈಕ್ ಚಾಲಕರ ಸಂಘ ಪ್ರತಿಭಟನೆ ನಡೆಸಲಿದೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ನಿರಂತರ ದೌರ್ಜನ್ಯ ನಡೆಸುತ್ತಿದ್ದಾರೆ. ಹೀಗಾಗಿ ಆಟೋ ಚಾಲಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ಸಾವಿರಾರು ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಲಿದ್ದಾರೆ. ಇತ್ತೀಚೆಗಷ್ಟೇ ಆಟೋ ರಿಕ್ಷಾ ಚಾಲಕರು ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕೌಂಟರ್ ಎಂಬಂತೆ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

Also Read  12 ನೇ ತರಗತಿ ಲೆಕ್ಕಶಾಸ್ತ್ರ ಪರೀಕ್ಷೆ; ಬೇಸಿಕ್‌ ಕ್ಯಾಲ್ಕುಲೇಟರ್‌ ಅನುಮತಿಗೆ ಪ್ರಸ್ತಾಪ

 

 

error: Content is protected !!