ಮನೆಯಲ್ಲಿ ಆಕಸ್ಮಿಕ ಬೆಂಕಿ             ➤ ದಂಪತಿ ಸಜೀವ ದಹನ…!

(ನ್ಯೂಸ್ ಕಡಬ)newskadaba.com ಕೊಪ್ಪಳ: ಮಾ,27  ‘ಶಾರ್ಟ್​ ಸರ್ಕ್ಯೂಟ್​’ನಿಂದ ಮನೆಗೆ ಬೆಂಕಿ ಹೊತ್ತುಕೊಂಡು ದಂಪತಿ ಸಜೀವ ದಹನವಾಗಿರುವ ದಾರುಣ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ.ಸೈದಾಪುರ ಪಟ್ಟಣದ ರಾಗಯ್ಯ(39), ಮತ್ತವರ ಪತ್ನಿ ಶಿಲ್ಪಾ(35) ಮೃತಪಟ್ಟವರು.

 

ಅಶೋಕಯ್ಯ ಕಾಳಬೆಳಗುಂದಿ ಎಂಬುವರಿಗೆ ಸೇರಿದ ಮನೆಯಲ್ಲಿ ಘಟನೆ ಸಂಭವಿಸಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕದಳ ಸಿಬ್ಬಂದಿ  ಬೆಂಕಿ ನಂದಿಸಿದ್ದು, ಸೈದಾಪುರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Also Read  ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

 

 

error: Content is protected !!
Scroll to Top