ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ ➤ ಕಾರು ವಶಕ್ಕೆ

(ನ್ಯೂಸ್ ಕಡಬ)newskadaba.com ಪಡುಬಿದ್ರೆ, ಮಾ.27. 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜ ಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.


ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿರುವಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಕೈ ಚೀಲ ದೊರಕ್ಕಿದ್ದು, ಇದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡುಬಂದಿದೆ.

Also Read  Kometa Слоты | Топ казино в интернете, честное интернет казино

error: Content is protected !!
Scroll to Top