ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು ಪಿಎಸ್ ವ್ಯಾಪ್ತಿಯಲ್ಲಿ ಜೂಜು ದಾಳಿ ನಡೆದಿದೆ. ಒಟ್ಟು 14 ಮಂದಿ, ನಗದು ವಶ , 2 ಬೈಕ್ ವಶಪಡಿಸಿಕೊಳ್ಳಲಾಗಿದೆ.

Also Read  ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ

 

error: Content is protected !!
Scroll to Top