(ನ್ಯೂಸ್ ಕಡಬ) newskadaba.com. ಕೋಲ್ಕತ್ತಾ, ಮಾ. 27. ಸ್ವಂತ ಮಗುವನ್ನು ಪಡೆಯಲು ‘ನರಬಲಿ’ ಹೆಸರಲ್ಲಿ ತನ್ನ ನೆರೆಯಮನೆಯ ಅಪ್ರಾಪ್ತ ಬಾಲಕಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಏಳು ವರ್ಷದ ಬಾಲಕಿಯ ಮೃತದೇಹವನ್ನು ಭಾನುವಾರ ತಡರಾತ್ರಿ ದಕ್ಷಿಣ ಕೋಲ್ಕತ್ತಾದ ತಿಲಜಾಲದಲ್ಲಿರುವ ಆರೋಪಿಯ ನಿವಾಸದಿಂದ ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಬಾಲಕಿಯ ದೇಹವನ್ನು ಗೋಣಿ ಚೀಲದೊಳಗೆ ತುಂಬಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಮೇಲೆಲ್ಲ ಮಾರಣಾಂತಿಕ ಗಾಯದ ಗುರುತುಗಳು ಪತ್ತೆಯಾಗಿವೆ.








