ಕಾಸರಗೋಡು ಆಸ್ಪತ್ರೆ ಆವರಣದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 27.   ನಗರದ ಪರಿಸರದ ಬಾವಿಯೊಂದರಲ್ಲಿ ಅಪರಿಚಿತ ಪುರುಷನೊಬ್ಬನ ಮೃತದೇಹ ಇಂದು ಪತ್ತೆಯಾಗಿದೆ. ಕರಂದಕ್ಕಾಡ್ ಅಶ್ವಿನಿ ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ದುರ್ವಾಸನೆ ಬರುತ್ತಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ.

ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮಹಜರು ನಡೆಸಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.

Also Read  ಮೈಸೂರು ಚುನಾವಣೆ ಹಿನ್ನೆಲೆ ➤ ಐಪಿಎಲ್ ಬೆಟ್ಟಿಂಗ್ ಮೇಲೂ ತೀವ್ರ ನಿಗಾ!

 

error: Content is protected !!
Scroll to Top