ಬೇಲೂರು-ಹಾಸನ ರಾಷ್ರೀಯ ಹೆದ್ದಾರಿ ವಿಸ್ತರಣೆಗೆ 698.08 ಕೋಟಿ ರೂ. ಅನುದಾನ ಬಿಡುಗಡೆ    ➤ನಿತಿನ್‌ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು:ಮಾ,27  ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕೊಡುಗೆಗಳ ಸರಮಾಲೆಯೇ ಹರಿದುಬರುತ್ತಿದೆ. ಇದೀಗ ಹಲವು ರಾಷ್ಟ್ರೀಯ ಹೆದ್ದಾರಿಗಳ ಅಗಲೀಕರಣಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿ ಅನುದಾನವನ್ನು ಬಿಡುಗಡೆ ಮಾಡಿದೆ.

ಹಾಗೆಯೇ ಬೇಲೂರು- ಹಾಸನ ನಡುವಿನ ಹೆದ್ದಾರಿ ವಿಸ್ತರಣೆಗೂ ಅನುದಾನದವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತಡಿದ ಅವರು, ಕರ್ನಾಟಕದಲ್ಲಿನ ಬೇಲೂರು- ಹಾಸನ ವಿಭಾಗದ NH 373 ಹೆದ್ದಾರಿ ವಿಸ್ತರಣೆಗೆ ಕೇಂದ್ರ ಸರ್ಕಾರ 698.08 ಕೋಟಿ ರೂ. ಅನುಮೋದನೆ ನೀಡಿದೆ. ವಾರ್ಷಿಕ ಯೋಜನೆ 2022-23ರ ಅಡಿಯಲ್ಲಿ ಈ ಯೋಜನೆಯನ್ನು ಎಂಜಿನಿಯರಿಂಗ್, ಇಪಿಸಿ ಮೋಡ್‌ನಲ್ಲಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Also Read  ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

 

 

error: Content is protected !!
Scroll to Top