ಮನೆ ಬಾಗಿಲಿಗೆ ಮೀನು ಸರಬರಾಜು ➤ ಸುಳ್ಯದಲ್ಲಿ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ಮೀನು ಕೃಷಿಯಿಂದ ಉತ್ಪತ್ತಿಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು ಮುಖ್ಯಮಂತ್ರಿಗಳು ಇದಕ್ಕೆ ಒಪ್ಪಿದ್ದಾರೆ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಹೇಳಿದರು.

ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು.

Also Read  ಮಂಗಳೂರು ಚಲೋ ಬೈಕ್ ರ್ಯಾಲಿ ► ಹೆಲ್ಮೆಟ್ ಧರಿಸದೆ ವಿವಾದಕ್ಕೆ ಗುರಿಯಾದ ಬಿಜೆಪಿ

error: Content is protected !!
Scroll to Top