‘ನನ್ನ ಕೆಲಸ ನಿಮಗೆ ಇಷ್ಟವಾಗಿದ್ರೆ ಮತ ಹಾಕಿ, ಇಲ್ಲದಿದ್ದರೆ ಹಾಕಬೇಡಿ’ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. “ನಿಮಗೆ ನನ್ನ ಕೆಲಸ ಇಷ್ಟವಾಗಿದ್ರೆ ನನಗೆ ಮತ ಹಾಕಿ, ಇಲ್ಲದಿದ್ರೆ ಹಾಕಬೇಡಿ, ನಾನು ಬೆಣ್ಣೆ ಹಚ್ಚುವುದಿಲ್ಲ” ಎಂದು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.


ಈ ಕುರಿತು ಮಾತನಾಡಿದ ಅವರು, “ದೇಶದಲ್ಲಿ ಜೈವಿಕ ಇಂಧನ, ಜಲಾನಯನ ಸಂರಕ್ಷಣೆ ಸೇರಿದಂತೆ ಹಲವು ಪ್ರಯೋಗಗಳನ್ನು ಮಾಡುತ್ತಿದ್ದೇನೆ. ಬಂಜರು ಭೂಮಿ, ಹವಾಮಾನ ಬದಲಾವಣೆ ಮತ್ತು ಜಲ ಸಂರಕ್ಷಣೆ ಕ್ಷೇತ್ರದಲ್ಲಿ ಹಲವು ಪ್ರಯೋಗಗಳ ಸಾಧ್ಯತೆಗಳಿವೆ. ನಮ್ಮ ಕಡೆಯಿಂದಲೂ ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ” ಎಂದರು.

Also Read  ಸುಳ್ಯ: ಕಣಿಪ್ಪಿಲ್ಲ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಬೆಂಕಿ ಅವಘಡ

error: Content is protected !!
Scroll to Top