ಮಾ.31 ರಿಂದ `SSLC’ ಪರೀಕ್ಷೆ…!   ➤ ವಿದ್ಯಾರ್ಥಿಗಳಿಗೆ  ನಿಯಮ ಪಾಲನೆ ಕಡ್ಡಾಯ                          

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ,28. 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನುನೀಡಲಾಗುತ್ತಿದೆ.ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು.

ಇತರೆ ಕಾರಣಗಳಿಗೆ ಖಜಾನೆಯ ಸ್ಟ್ರಾಂಗ್ ರೂಮ್ ತೆರೆಯುವ ಪ್ರಸಂಗ ಬಂದರೆ, ಬಿ.ಇ.ಓ ನೇತೃತ್ವದ 3 ಜನರ ಸಮಿತಿ ಮಾಹಿತಿ ನೀಡಿ ಅವರ ಹಾಜರಿಯಲ್ಲಿ ಸ್ಟ್ರಾಂಗ್ ರೂಮ್ ತೆರೆಯಬೇಕು. ಪ್ರಶ್ನೆ ಪತ್ರಿಕೆಗಳಿಗೆ ಯಾವುದೇ ರೀತಿಯಲ್ಲಿ ಹಾನಿ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಾಗಿ ಇಲಾಖೆ ಸೂಚನೆ ನೀಡಿದೆ.

Also Read  ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

 

 

 

 

 

error: Content is protected !!
Scroll to Top