ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ➤ತುಮಕೂರಲ್ಲಿ ಕಾಮುಕ ಶಿಕ್ಷಕನ ಬಂಧನ

(ನ್ಯೂಸ್ ಕಡಬ) newskadaba.com. ತುಮಕೂರು, ಮಾ. 28. ಜಿಲ್ಲೆಯ ಶಾಲೆಯೊಂದರ ಶಿಕ್ಷಕನೊಬ್ಬ  ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ಪೋಷಕರು‌ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆರೋಪ ಕೇಳಿಬರುತ್ತಿದ್ದಂತೆ ಕಾಮುಕ ಶಿಕ್ಷಕ ಮಂಜುನಾಥ್ ಹಾಗೂ ಮುಖ್ಯ ಶಿಕ್ಷಕ ನಟರಾಜ್​ರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬೋರನಗುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

4 ಮತ್ತು 5ನೇ ತರಗತಿ ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ಶಾಲೆಯ ಕೊಠಡಿಯಲ್ಲೇ ಲೈಗಿಂಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಶಿಕ್ಷಕನ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಶಿಕ್ಷಕನ ವಿರುದ್ಧ ತಿರುಗಿ ಬಿದ್ದ ಪೋಷಕರು ಹಾಗೂ ಗ್ರಾಮಸ್ಥರು‌ ಹಿರಿಯ ಅಧಿಕಾರಿಗಳಿಗೆ ದೂರು‌ ನೀಡಿದ್ದರು. ಇಷ್ಟೇ ಅಲ್ಲದೆ, ಕಾಮುಕ ಶಿಕ್ಷಕನನ್ನು ಬಂಧಿಸುವಂತೆ ಶಾಲೆಯ ಬಳಿ ಬಂದು ಪ್ರತಿಭಟನೆ ಸಹ ನಡೆಸಿದ್ದರು.

Scroll to Top