ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲು ವಿಫಲ: ಸಂಸದ ನಳಿನ್ ► ಬಶೀರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲು ಸಂಸದರಿಂದ ಆಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ, ಜ.08. ಮಂಗಳೂರಿನ ಕೊಟ್ಟಾರಚೌಕಿಯಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಭಾನುವಾರ ಮೃತಪಟ್ಟ ಫಾಸ್ಟ್ ಫುಡ್ ವ್ಯಾಪಾರಿ ಬಶೀರ್ ಕುಟುಂಬಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

ಅವರು ಭಾನುವಾರದಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತಾಂಧರಿಂದ ನಿರಂತರ ಹತ್ಯೆಗಳು ನಡೆಯುತ್ತಿದ್ದು, ಇಂತಹ ಕೃತ್ಯ ಖಂಡನೀಯ. ಯಾವುದೇ ಧ್ವೇಷ ಇದ್ದರೂ ಕಾನೂನು ಕೈಗೆತ್ತಿಕೊಂಡು ಒಬ್ಬ ವ್ಯಕ್ತಿಯನ್ನು ಹತ್ಯೆಗೈಯ್ಯುವ ಹಕ್ಕು ಯಾರಿಗೂ ಇಲ್ಲ ಎಂದರು. ರಾಜ್ಯದಲ್ಲಿ ಮಾನವ ಹತ್ಯೆಗಳನ್ನು ತಡೆಯುವಲ್ಲಿ ಸಿದ್ದರಾಮಯ್ಯ ಸರಕಾರ ಸೋತಿದೆ‌. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೊಲೆ, ಹತ್ಯೆ ನಡೆಸುವವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.

Also Read  ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ರಘಪತಿ ಭಟ್, ಬಿಜೆಪಿ ಮುಖಂಡರಾದ ಯಶ್‌ಪಾಲ್ ಸುವರ್ಣ, ಪ್ರಭಾಕರ ಪೂಜಾರಿ, ಶ್ಯಾಮಲ ಕುಂದರ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಪ್ರವೀಣ್ ಕಪ್ಪೆಟ್ಟು ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top