ಮಂಗಳೂರು: ‘ರಂಗ್‌‌ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ ಪ್ರಕರಣ ➤ ಆರು ಮಂದಿ ಆರೋಪಿಗಳಿಗೆ ಜಾಮೀನು

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.28. ಮರೋಳಿಯಲ್ಲಿ ಹೋಳಿ ಪ್ರಯುಕ್ತ ಆಯೋಜಿಸಲಾಗಿದ್ದ ರಂಗ್‌‌ದ ಬರ್ಸಾ ಕಾರ್ಯಕ್ರಮಕ್ಕೆ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದ ಬಜರಂಗ ದಳ ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಯುವಕ-ಯುವತಿಯರು ಅಶ್ಲೀಲವಾಗಿ ನಡೆದುಕೊಳ್ಳುತ್ತಾರೆ, ಅನ್ಯಕೋಮಿನ ಯುವಕರು ಕೂಡ ಪಾಲ್ಗೊಳ್ಳುತ್ತಾರೆ ಎಂದು ಆರೋಪಿಸಿ ಬಜರಂಗದಳದ ಆರು ಮಂದಿ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಬ್ಯಾನರ್‌ ಹರಿದು ಹಾಕಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

Also Read  ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ

 

error: Content is protected !!
Scroll to Top