ಕೊರೊನಾ ಹವಾಳಿ ಮಧ್ಯೆ ಕೇಂದ್ರದಿಂದ ಖಡಕ್ ಸೂಚನೆ..!   ➤’RT-PCR’, ಬೂಸ್ಟರ್ ಡೋಸ್ ಪ್ರಮಾಣ ಹೆಚ್ಚಳಕ್ಕೆ ಸಲಹೆ                        

(ನ್ಯೂಸ್ ಕಡಬ)Newskadaba.comವದೆಹಲಿ: ಮಾ,28.ಭಾರತವು ಸತತ ಎರಡನೇ ದಿನ 1,800ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸುತ್ತಿದ್ದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 10,000 ಕ್ಕಿಂತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರ್ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವನ್ನ ಹೆಚ್ಚಿಸಲು ಮತ್ತು ಬೂಸ್ಟರ್ ಡೋಸ್ ವ್ಯಾಪ್ತಿಯನ್ನ ಹೆಚ್ಚಿಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಆಮ್ಲಜನಕ ಸಿಲಿಂಡರ್ಗಳು, ಪಿಎಸ್‌ಎ ಸ್ಥಾವರಗಳು, ವೆಂಟಿಲೇಟರ್ಗಳು, ಲಾಜಿಸ್ಟಿಕ್ಸ್ ಮತ್ತು ಮಾನವ ಸಂಪನ್ಮೂಲಗಳು ಸೇರಿದಂತೆ ಆಸ್ಪತ್ರೆ ಮೂಲಸೌಕರ್ಯಗಳ ಕಾರ್ಯಾಚರಣೆಯ ಸಿದ್ಧತೆಯನ್ನ ಖಚಿತಪಡಿಸಿಕೊಳ್ಳಲು ಏಪ್ರಿಲ್ 10 ಮತ್ತು 11 ರಂದು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಮಾಕ್ ಡ್ರಿಲ್ಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗಿನ ಸಭೆಯಲ್ಲಿ ತಿಳಿಸಿದ್ದಾರೆ.

Also Read  ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ

 

 

 

 

error: Content is protected !!
Scroll to Top