ಕಡಬ: ಹೃದಯಾಘಾತಕ್ಕೆ ಕಡಬದ ಯೋಧ ಬಲಿ ➤ ಇಂದು ಹುಟ್ಟೂರಿಗೆ ಪಾರ್ಥಿವ ಶರೀರ ರವಾನೆ

(ನ್ಯೂಸ್ ಕಡಬ)newskadaba.com  ಕಡಬ, ಮಾ.28. ಕಡಬ ಮೂಲದ ಯೋಧರೊಬ್ಬರು ಮದ್ರಾಸ್ ರಿಜಿಮೆಂಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ವರದಿಯಾಗಿದೆ. ಕಡಬ ತಾಲೂಕಿನ  ಕುಟ್ರುಪ್ಪಾಡಿ ಗ್ರಾಮದ ತರಪ್ಪೇಳ್‌ ನಿವಾಸಿ ಜೋನಿ ಎಂಬವರ ಮಗ  ಲಿಜೇಶ್ ಕುರಿಯನ್ ಮೃತ ಯೋಧರಾಗಿದ್ದಾರೆ.

ಮಾ.26 ರಂದು ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತ ಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೆ  ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.  ಇವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕಡಬ ತಲುಪಲಿದೆ.

11:30ಕ್ಕೆ ಕುಟ್ರುಪ್ಪಾಡಿ ಸಂತ ಮೇರಿಸ್ ಕ್ಯಾಥೋಲಿಕ್ ಫೋರೋನಾ ದೇವಾಲಯದಲ್ಲಿ ಅಂತ್ಯಸಂಸ್ಕಾರ ವಿಧಿವಿಧಾನ ನೆರವೇರಲಿದೆ”  ಎಂದು ಚರ್ಚ್ ಧರ್ಮಗುರು ಜೋಸ್ ಆಯಂಕುಡಿ ತಿಳಿಸಿದ್ದಾರೆ. ಮೃತ ಲಿಜೇಶ್ ತಮ್ಮ ಪತ್ನಿ ಜೋಮಿತಾ, ಒಂದು ವರ್ಷದ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Also Read  ಹಿಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು - ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು

 

 

error: Content is protected !!
Scroll to Top