ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.28. ಇದೇ ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಸೂಚಿಸಲಾಗಿದೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

Also Read  ನಿಟ್ಟೆ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರದ ಆವಿಷ್ಕಾರ

 

error: Content is protected !!
Scroll to Top