ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಮಾ. 28. ಏಪ್ರಿಲ್ 04 ಇಲ್ಲವೇ ಏಪ್ರಿಲ್ 08 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿತ್ತು ಎನ್ನಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

 

 

Scroll to Top