ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.28. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ.

ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್ ಕಾಲಿನ ಕೆಳಗಡೆ ಬಿದ್ದಕೊಂಡಿದ್ದುದರಿಂದ ಆತ್ಮಹತ್ಯೆಯು ವ್ಯವಸ್ಥಿತ ಸಂಚು ಎಂಬ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

Also Read  ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ

error: Content is protected !!
Scroll to Top