ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ► ಐವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08. ಬೆಳ್ಳಂಬೆಳಗ್ಗೆ ಉಂಟಾದ ಅಗ್ನಿ ಅವಘಡದಲ್ಲಿ ರಾತ್ರಿ ಪಾಳಿಯ ಕೆಲಸ ಮುಗಿಸಿ ಮಲಗಿದ್ದ ಐವರು ಸಜೀವ ದಹನವಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್‍ವೊಂದರಲ್ಲಿ ಸೋಮವಾರ ನಡೆದಿದೆ.

ಹಳೆಯದಾದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಕೈಲಾಸ್ ಬಾರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಂತರ ಬೆಂಕಿಯ ಕೆನ್ನಾಲಗೆ ಇಡೀ ಕಟ್ಟಡವನ್ನೇ ಆವರಿಸಿದೆ. ಕಟ್ಟಡದಲ್ಲಿ ಯಾವುದೇ ಎಮರ್ಜೆನ್ಸಿ ಎಕ್ಸಿಟ್ ಇಲ್ಲದ ಕಾರಣ ರಾತ್ರಿ ಕೆಲಸ‌ ಮುಗಿಸಿ ನಿದ್ದೆ ಮಾಡಿ ಮಲಗಿದ್ದ ಐವರು ಸಜೀವ ದಹನವಾಗಿದ್ದಾರೆ.

Also Read  ಪ್ರೇಮವಿವಾಹ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಈ ರಾಶಿಯವರಿಗೆ ತಪ್ಪದೆ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ

ಮೃತರನ್ನು ಮಂಡ್ಯದ ಕೀರ್ತಿ(24), ತುಮಕೂರಿನ ಸ್ವಾಮಿ(23), ಪ್ರಸಾದ್(20), ಮಹೇಶ್(35) ಹಾಗೂ ಹಾಸನದ ಮಂಜುನಾಥ್(45), ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಐವರ ಮೃತದೇಹಗಳನ್ನು ಕಟ್ಟಡದಿಂದ ಹೊರಕ್ಕೆ ತೆಗೆದಿದ್ದಾರೆ.

error: Content is protected !!
Scroll to Top