➤ನೂತನ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ. 28. ಇಂದು ಆರಂಭಿಸಿರುವ ಒಂಭತ್ತು ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು.

ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.

ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು.

Also Read  ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಹಸು..!

ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು.

error: Content is protected !!
Scroll to Top