ನಾಪತ್ತೆಯಾಗಿದ್ದ ಕ್ರಿಕೆಟಿಗ ಕೇದರ್ ಜಾಧವ್ ತಂದೆ ಕೊನೆಗೂ ಪತ್ತೆ..!

(ನ್ಯೂಸ್ ಕಡಬ)newskadaba.com ಪುಣೆ, ಮಾ.28. ಭಾರತ ಕ್ರಿಕೆಟ್‌ ತಂಡದ ಆಟಗಾರ ಕೇದಾರ್ ಜಾಧವ್ ಅವರ ತಂದೆ ಮಹಾದೇವ್‌ ಜಾಧವ್ ನಾಪತ್ತೆಯಾಗಿ ಆತಂಕ ಸೃಷ್ಟಿಸಿದ್ದರು. ಇದೀಗ ನಾಪತ್ತೆಯಾಗಿ ಕೆಲವೇ ಗಂಟೆಗಳಲ್ಲಿ ಮಹಾದೇವ್ ಜಾಧವ್ ಕೊನೆಗೂ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

75 ವರ್ಷದ ತಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಟೀಂ ಇಂಡಿಯಾ ಕ್ರಿಕೆಟಿಗ ಕೇದಾರ್ ಜಾಧವ್‌, ಪುಣೆ ನಗರದ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಕೇದಾರ್ ಜಾಧವ್ ದೂರು ದಾಖಲಿಸಿದ ನಂತರ, ಪೊಲೀಸರು ಅವರ ತಂದೆಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ವರದಿಯ ಪ್ರಕಾರ, ಕೇದಾರ್ ಜಾಧವ್ ಮತ್ತು ಮಹದೇವ್ ಜಾಧವ್ ಪುಣೆ ನಗರದ ಕೊತ್ರೋಡ್ ಪ್ರದೇಶದ ನಿವಾಸಿಗಳು. ಮಹದೇವ್ ಜಾಧವ್ ಮಾರ್ಚ್ 27 ರಂದು ಮುಂಜಾನೆ ಯಾರಿಗೂ ಮಾಹಿತಿ ನೀಡದೇ ಮನೆಯಿಂದ ಹೊರಹೋಗಿದ್ದಾರೆ. ಆ ಬಳಿಕ ಮನೆಗೆ ವಾಪಸಾಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

Also Read  ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌

 

error: Content is protected !!
Scroll to Top