ಲೈಂಗಿಕ ದೌರ್ಜನ್ಯ ನಡೆಸಿ 7 ವರ್ಷದ ಬಾಲಕಿ ಹತ್ಯೆ ಮಾಡಿದ ನೆರೆಮನೆಯ ಕಾಮುಕ

(ನ್ಯೂಸ್ ಕಡಬ)newskadaba.com  ಕೊಲ್ಕತ್ತಾ, ಮಾ.28. ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ 7 ವರ್ಷದ ಬಾಲಕಿಯನ್ನು ಆಕೆಯ ನೆರೆಹೊರೆಯ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿ ನಂತರ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಗ್ನೇಯ ಕೋಲ್ಕತ್ತಾದ ಜನದಟ್ಟಣೆಯ ಪ್ರದೇಶದಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕಿ ಗೋಣಿ ಚೀಲದೊಳಗೆ ಶವವಾಗಿ ಪತ್ತೆಯಾಗಿದ್ದು, ಮಗು ವಾಸಿಸುತ್ತಿದ್ದ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದ ನೆರೆಹೊರೆಯವರ ಮನೆಯಲ್ಲಿ ಶವ ಮುಚ್ಚಿಡಲಾಗಿತ್ತು ಎಂದು ತಿಳಿದುಬಂದಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಲ್ಜಾಲಾ ಸಮೀಪದ ಕುಸ್ತಿಯಾ ಎಂಬಲ್ಲಿ ನಾಪತ್ತೆಯಾದ ಕೆಲ ಗಂಟೆಗಳ ಬಳಿಕ ಶವ ಪತ್ತೆಯಾಗಿದೆ. ಈ ಹಿನ್ನೆಲೆ ಸಿಟ್ಟಿಗೆದ್ದ ಸ್ಥಳೀಯ ಜನರು ರಸ್ತೆ ಮತ್ತು ರೈಲ್ವೆ ಹಳಿಗಳನ್ನು ನಿರ್ಬಂಧಿಸಿದ್ದಾರೆ. ಜತೆಗೆ ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ.

Also Read  ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು

 

error: Content is protected !!
Scroll to Top