ಪ್ಯಾನ್ ಕಾರ್ಡ್‌ಗೆ ಆಧಾರ್ ಜೋಡಣೆ ಅವಧಿ ಜೂ.30ರವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಮಾ.28. ಕೊನೆಯ ದಿನ ಸಮೀಪಿಸುತ್ತಿದ್ದರೂ ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಲಾಗದೆ ಪರದಾಡುತ್ತಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಬಂದಿದೆ. ಈ ಎರಡೂ ಗುರುತಿನ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ.

ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು.

Also Read  ದೆಹಲಿ ಮಹಾನಗರ ಪಾಲಿಕೆ ಚುನಾವಣೆ ➤ AAP ಭರ್ಜರಿ ಗೆಲುವು

 

error: Content is protected !!
Scroll to Top