ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.


ಪುತ್ರ ಪ್ರಶಾಂತ್ ನಿವಾಸದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧನ ಮಾಡಿದ್ದರು.

Also Read  ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು

error: Content is protected !!
Scroll to Top