ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ.. !!     ➤ ಸಾರ್ವಜನಿಕರಲ್ಲಿ ಆತಂಕ..!                        

(ನ್ಯೂಸ್ ಕಡಬ)Newskadaba.com  ವಿಜಯನಗರ: ಮಾ.29 ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ.

ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, 15ರಿಂದ 20 ಕಿಲೋ ಮೀಟರ್ ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ.ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Also Read  ಕಡಬ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

 

 

 

 

 

 

 

 

 

error: Content is protected !!
Scroll to Top