ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಖಾಸಗಿ ಶಾಲೆಗಳ ತೀವ್ರ ವಿರೋಧದ ನಡುವೆಯೂ ರಾಜ್ಯಾದ್ಯಂತ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.

ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು, 5ನೇ ತರಗತಿಗೆ 56,157 ಶಾಲೆಗಳಿಂದ 9,59,734 ವಿದ್ಯಾರ್ಥಿಗಳು ಹಾಗೂ 8ನೇ ತರಗತಿಗೆ 22,639 ಶಾಲೆಯ 9,43,919 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದತ್ತಾಂಶ ನೀಡಿದೆ.

 

Scroll to Top