ದೀಪಕ್ ರಾವ್ ಹತ್ಯೆಗೆ ಬಿಜೆಪಿ ಕಾರ್ಪೋರೇಟರ್ ಸುಪಾರಿ ► ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಮೈಸೂರು, ಜ.08. ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳದಲ್ಲಿ ಜನವರಿ 3ರಂದು ಹಾಡುಹಗಲೇ ದುಷ್ಕರ್ಮಿಗಳಿಂದ ಬರ್ಬರ ಹತ್ಯೆಗೀಡಾದ‌ ದೀಪಕ್ ರಾವ್ ಹತ್ಯೆಗೆ ಬಿಜೆಪಿಯ ಸ್ಥಳೀಯ ಕಾರ್ಪೋರೇಟರ್ ಸುಪಾರಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ‌ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಸುಪಾರಿ ನೀಡಿರುವುದರ ಬಗ್ಗೆ ನನಗೆ ಮಾಹಿತೆಯಿದೆ. ಆದರೆ ಈ ಸತ್ಯಗಳೆಲ್ಲವನ್ನೂ ತನಿಖಾ ಸಂಸ್ಥೆಗಳ ಮೂಲಗಳಿಂದ ಮಾಹಿತಿ ಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಯಾಕಿನ್ನೂ ಮೌನವಾಗಿದೆಯೆನ್ನುವುದು ಸಂಶಯಗಳಿಗೆ ಕಾರಣವಾಗಿದೆ ಎಂದಿದ್ದಾರೆ.

Also Read  ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ

error: Content is protected !!
Scroll to Top