ನೆಲ್ಯಾಡಿ: ಬೆಳ್ಳಂಬೆಳಗ್ಗೆ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.30. ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಎಂಬಲ್ಲಿ ಗುರುವಾರದಂದು ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

Scroll to Top