(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಗೊಂಡಿದೆ. ಇದರಿಂದ ಕರಾವಳಿ ಭಾಗದಲ್ಲಿ ತರಾತುರಿಯಲ್ಲಿ ನಡೆಯುತ್ತಿದ್ದ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ, ಹಕ್ಕುಪತ್ರ ವಿತರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಿಗೆ ಬುಧವಾರದಿಂದಲೇ ಬ್ರೇಕ್ ಹಾಕಲಾಗಿದೆ.
ಕರ್ನಾಟಕ ವಿಧಾನಸಭೆಗೆ ಮೇ.10ರಂದು ಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ ವಿತರಣೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಿಲ್ಲಿಸಲಾಗಿದೆ. ಜನಪ್ರತಿನಿಧಿಗಳ ಸಾಧನೆ ಸಂಬಂಧಿ ಪ್ರದರ್ಶನಗಳು, ಪೋಸ್ಟರ್, ಬ್ಯಾನರ್, ಕಟೌಟ್‌ಗಳ ತೆರವು ಕಾರ್ಯ ಕೂಡಾ ಆರಂಭಗೊಂಡಿದೆ.